ರಾಷ್ಟ್ರೀಯ

ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಯೋಧರು

Pinterest LinkedIn Tumblr

dccccc1

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರು ಮೃತಪಟ್ಟಿದ್ದಾರೆ.

ಲೋಲಬ್ ಪರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಯೋಧರು ಶೋಧ ಕಾರ್ಯ ನಡೆಸುತ್ತಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಇನ್ನು ಹಲವು ಉಗ್ರರು ಅಡಗಿರುವ ಶಂಕೆ ಹಿನ್ನೆಲೆ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆಸಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Write A Comment