ರಾಷ್ಟ್ರೀಯ

ಮಾಜಿ ಸಚಿವ ಗುರುನಾಥ್ ಆತ್ಮಹತ್ಯೆ

Pinterest LinkedIn Tumblr

gurunathhhಬೆಂಗಳೂರು: ಮಾಜಿ ಸಚಿವ ಸಿ.ಗುರುನಾಥ್ ಅವರು ಗುರುವಾರ ತಿಲಕ್ ನಗರದ ಸಾಗರ್ ಅಪೋಲೋ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುನಾಥ್ ಅವರು ಮಧುಮೇಹ ಖಾಯಿಲೆಯಿಂದ ಬಳಲುತ್ತಿದರು. ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಗುರುನಾಥ್ ಅವರು 1994ರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು.
ಏಪ್ರಿಲ್ 18ರಂದು ಗುರುನಾಥ್ ಅವರನ್ನು ತಿಲಕ್ ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಬೇಕಿತ್ತು. ಈ ಮಧ್ಯೆ ಅವರು ಆಸ್ಪತ್ರೆಯ ಕಿಟಕಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Write A Comment