ರಾಷ್ಟ್ರೀಯ

ಉತ್ತರಾಖಂಡ ಬಿಕ್ಕಟ್ಟು: ಸುಪ್ರೀಂ ಕೋರ್ಟ್ ಮೊರೆಹೋದ ಕೇಂದ್ರ ಸರ್ಕಾರ

Pinterest LinkedIn Tumblr

suಡೆಹ್ರಾಡೂನ್ (ಏ.20): ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್’ನಲ್ಲಿ ಪ್ರಶ್ನಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್’ನಲ್ಲಿ ನಾಳೆ ಪ್ರಶ್ನಿಸಲಿದ್ದೇವೆಯೆಂದು ಭಾರತದ ಆಟಾರ್ನಿ ಜನರಲ್ ಮುಕುಲ್ ರೊಹ್ತಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮನವಿಯು ಕೇವಲ ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಪಟ್ಟಿದ್ದಾಗಿದ್ದು,ಶಾಸಕರ ಅನರ್ಹತೆ ಬಗ್ಗೆ ಅಲ್ಲವೆಂದು ಅವರು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಉತ್ತರಾಖಂಡ ರಾಜ್ಯದಲ್ಲಿ ಹೇರಿರುವ ರಾಷ್ಟ್ರಪತಿ ಆಳ್ವಿಕೆಯನ್ನು ಹೈಕೊರ್ಟ್ ಇಂದು ರದ್ದುಗೊಳಿಸಿರುವುದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

Write A Comment