ರಾಷ್ಟ್ರೀಯ

ಮಗಳನ್ನೇ ಕೊಂದು ಸುಟ್ಟು ಹಾಕಿದ ತಂದೆ ಮುಂದೆ ಏನು ಮಾಡಿದ ಗೊತ್ತಾ..?

Pinterest LinkedIn Tumblr

kill arrest

ನವದೆಹಲಿ: ಮಗಳನ್ನು ಕತ್ತು ಹಿಸುಕಿ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ತಂದೆ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ದೆಹಲಿಯ ಜೈತ್ ಪುರ್ ಪ್ರದೇಶದಲ್ಲಿ ವಕ್ತಿಯೊಬ್ಬ ತನ್ನ ಪತ್ನಿ ಎದುರೇ 15 ವರ್ಷದ ಮಗಳನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ತದ ನಂತರ ಮೃತದೇಹವನ್ನು ಹೊರವಲಯದಲ್ಲಿ ಸುಟ್ಟು ಹಾಕಿದ್ದಾನೆ. ಅಷ್ಟೇ ಅಲ್ಲದೇ, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಇನ್ನುಳಿದ ಇಬ್ಬರು ಮಕ್ಕಳನ್ನು ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾನೆ.

ಅಕ್ಕಪಕ್ಕದವರಿಗೆಲ್ಲಾ ಮೂರ್ಛೆ ರೋಗದಿಂದ ಮಗಳು ಬಳಲುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ. ಆದರೆ, ಪತ್ನಿ ತನ್ನ ದುಃಖವನ್ನು ಪಕ್ಕದ ಮನೆಯವರ ಬಳಿ ಹೇಳಿಕೊಂಡಾಗ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತನ್ನ ಮಗಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಗಳು ಬೇರೊಬ್ಬ ಯುವಕನೊಂದಿಗೆ ಸಂಬಂಧ ಹೊಂದಿದ್ದಳು, ಇದಕ್ಕೆ ನಾನು ವಿರೋಧಿಸಿದ್ದೆ. ಈ ವಿಚಾರವಾಗಿ ನಮ್ಮಿಬ್ಬರ ನಡುವೆ ಜಗಳವೂ ನಡೆದಿತ್ತು ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Write A Comment