ರಾಷ್ಟ್ರೀಯ

ಉತ್ತರಾಖಂಡ ಬಿಕ್ಕಟ್ಟು: ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಮ್ ಕೋರ್ಟ್

Pinterest LinkedIn Tumblr

suprimcourtನವದೆಹಲಿ (ಏ.22): ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಮ್ ಕೋರ್ಟ್ ಇಂದು ತಡೆ ನೀಡಿದೆ.
ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿ ಅಲ್ಲಿನ ಹೈಕೋರ್ಟ್ ನಿನ್ನೆ ಆದೇಶ ಹೊರಡಿಸಿತ್ತು. ಅದರಿಂದ ತೀವ್ರ ಮುಖಭಂಗಕ್ಕೊಳಗಾಗಿದ್ದ ಕೇಂದ್ರ ಸರ್ಕಾರ ಇಂದು ಸುಪ್ರೀಮ್ ಕೋರ್ಟ್ ಮೊರೆ ಹೋಗಿತ್ತು.
ಕೇಂದ್ರ ಸರ್ಕಾರ 27 ಏಪ್ರಿಲ್ ವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುದಿಲ್ಲ ಹಾಗೂ ಬಿಜೆಪಿಯು ಸರ್ಕಾರ ರಚಿಸುವುದಿಲ್ಲವೆಂದು ಕೇಂದ್ರ ಸರ್ಕಾರದ ಪರ ವಾದಿಸಿದ ಅಟಾರ್ನಿ ಜನರಲ್ ಮುಕುಲ್ ರೊಹಾತ್ಗಿಯವರು ಸುಪ್ರೀಮ್ ಕೋರ್ಟ್’ಗೆ ಹೇಳಿದ್ದಾರೆ.
ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಟಾರ್ನಿ ಜನರಲ್ ಮುಕುಲ್ ರೊಹಾತ್ಗಿಯವರು ಉತ್ತರಾಖಂಡ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಪುನರ್ಜಾರಿಗೊಳಿಸಲಾಗಿದೆಯೆಂದು ಹೇಳಿದ್ದಾರೆ.
ಉಚ್ಚಾಟಿತ ಮುಖ್ಯಮಂತ್ರಿ ಹರೀಶ್ ರಾವತ್ ಸುಪ್ರೀಮ್ ಕೋರ್ಟ್’ನ ಆದೇಶವನ್ನು ಪಾಲಿಸುವುದಾಗಿ ಹೇಳಿದ್ದಾರೆ.

Write A Comment