ರಾಷ್ಟ್ರೀಯ

ಮದುವೆ ಮನೆಯಲ್ಲಿ ಅಗ್ನಿ ಆಕಸ್ಮಿಕ, 12 ಮಂದಿ ಸಜೀವ ದಹನ

Pinterest LinkedIn Tumblr

fire-10ಪಾಟ್ನಾ: ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆಯುತ್ತಿದ್ದ ಮನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಸಜೀವವಾಗಿ ದಹನವಾಗಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದುವೆ ಸಮಾರಂಭದ ನಂತರ ಅತಿಥಿಗಳು ಮಲಗಿದ್ದ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ಬೆಂಕಿ ಅವಘಡ ಸಂಭವಿಸಲು ನಿಖರವಾದ ಕಾರಣ ತಿಳಿದುಬಂದಿಲ್ಲ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಬಿಹಾರ ಸರ್ಕಾರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.

Write A Comment