ರಾಷ್ಟ್ರೀಯ

ದೆಹಲಿ: ಸಹೋದರನ ಎದುರೆ ವಿವಾಹಿತೆ ಮೇಲೆ ಐವರಿಂದ ಗ್ಯಾಂಗ್ ರೇಪ್

Pinterest LinkedIn Tumblr

gang-Rape

ನವದೆಹಲಿ: 35 ವರ್ಷದ ವಿವಾಹಿತ ಮಹಿಳೆ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ದೆಹಲಿಯ ಪ್ರತಾಪ್‌ ವಿಹಾರ್‌ ಪ್ರದೇಶದಲ್ಲಿ ನಡೆದಿದೆ.

ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಟ್ರಾಫಿಕ್ ಜಾಸ್ತಿಯಾಗಿದ್ದ ಹಿನ್ನಲೆಯಲ್ಲಿ ಸಂತ್ರಸ್ತ ಮಹಿಳೆ ಹಾಗೂ ಆಕೆಯ ಸಹೋದರ ಬೇರೆ ರಸ್ತೆ ಮೂಲಕ ತೆರಳುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿ ನಂತರ ಸಹೋದರನಿಗೆ ಥಳಿಸಿ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾರೆ.

ಅತ್ಯಾಚಾರ ಬಳಿಕ ಮಹಿಳೆಯ ಬಳಿಯಿದ್ದ ಹಣ, ಮೊಬೈಲ್‌ ಹಾಗೂ ಆಭರಣ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಜಯ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅತ್ಯಾಚಾರವಾಗಿರುವುದು ದೃಢಪಟ್ಟಿದೆ.

Write A Comment