ರಾಷ್ಟ್ರೀಯ

ರಾಜ್ಯಸಭೆ: ಕಲಾಪ ಮುಂದೂಡಿಕೆ

Pinterest LinkedIn Tumblr

rajyasaaaನವದೆಹಲಿ (ಪಿಟಿಐ): ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಅವರು ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಕೇಂದ್ರ ಸರ್ಕಾರವು ವಿರೋಧ ಪಕ್ಷಗಳನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದೆ ಮತ್ತು ಪ್ರಜಾತಾಂತ್ರಿಕ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.

ಈ ನಡುವೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ಸಂಸದರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

Write A Comment