ರಾಷ್ಟ್ರೀಯ

ಆಸ್ಪತ್ರೆಗೆ ಭೇಟಿ ನೀಡಿ ಸುಷ್ಮಾ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

Pinterest LinkedIn Tumblr

sush-rahu

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯವನ್ನು ವಿಚಾರಿಸಿದರು.

ಏಪ್ರಿಲ್ 25ರಿಂದ ಎದೆ ರೋಗದ ಹಿನ್ನೆಲೆಯಲ್ಲಿ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ರಾಹುಲ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಕೆಲ ಕಾಲ ಕಾರ್ಡಿಯೋ ನ್ಯೂರೋ ಸೆಂಟರ್ ನಲ್ಲಿ ಉಳಿದು ಸುಷ್ಮಾ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.

ಸುಷ್ಮಾ ಸ್ವರಾಜ್ ಅವರು ಗುಣಮುಖರಾಗುತ್ತಿದ್ದು, ಅವರನ್ನು ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಸುಷ್ಮಾ ಸ್ವರಾಜ್ ಅವರು ವಿರೋಧ ಪಕ್ಷದ ನಾಯಕಿಯಾದಾಗಿನಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಆಪ್ತರಾಗಿದ್ದರು. ಈ ಗೆಳೆತನದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Write A Comment