ರಾಷ್ಟ್ರೀಯ

ಮೇ.6 ರಂದು ಕಾಂಗ್ರೆಸ್ ನಿಂದ ಸಂಸತ್ ಘೇರಾವ್ ಗೆ ಕರೆ

Pinterest LinkedIn Tumblr

gandhiನವದೆಹಲಿ: ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ, ಬರ, ವಿರೋಧಪಕ್ಷದ ವಿರುದ್ಧ ಸುಳ್ಳು ಆರೋಪಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಗಮನ ಸೆಳೆಯಲು ಕಾಂಗ್ರೆಸ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಮೇ.6 ರಂದು ಸಂಸತ್ ಘೇರಾವ್ ಗೆ ಕರೆ ನೀಡಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಜಂತರ್ ಮಂತರ್ ನಿಂದ ಪ್ರಾರಂಭವಾಗುವ ಮೆರವಣಿಗೆಯಲ್ಲಿ ಭಾಗಾವಹಿಸಲಿದ್ದಾರೆ. ಕಳೆದ ವರ್ಷ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದ ಭೂ ಸ್ವಾಧೀನ ಮಸೂದೆಯನ್ನು ವಿರೋಧಿಸಿ ಏ.19 ರಂದು ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತ್ತು.
ಪ್ರಜಾಪ್ರಭುತ್ವವವನ್ನು ಉಳಿಸುವ ಸಲುವಾಗಿ ಸಂಸತ್ ಘೇರಾವ್ ಗೆ ಕರೆ ನೀಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಹೇಳಿದ್ದಾರೆ.

Write A Comment