ತಂಗೈಲ್: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಟೈಲರ್ ನ್ನು ಹತ್ಯೆ ಮಾಡಲಾಗಿದೆ.
ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ಕುಳಿತಿದ್ದ ಟೈಲರ್ ನ್ನು ಹತ್ಯೆ ಮಾಡಿದ್ದಾರೆ ಎಂದು ಬಾಂಗ್ಲಾದೇಶದಲ್ಲಿರುವ ತಂಗೈಲ್ ಜಿಲ್ಲೆಯ ಎಸ್ ಪಿ ಅಸ್ಲಾಂ ಖಾನ್ ಹೇಳಿದ್ದಾರೆ. ಹತ್ಯೆಗೀಡಾಗಿರುವ ವ್ಯಕ್ತಿಯನ್ನು ನಿಖಿಲ್ ಚಂದ್ರ ಎಂದು ಗುರುತಿಸಲಾಗಿದ್ದು, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಈ ಹತ್ಯೆಗೂ ಇಸ್ಲಾಮಿಕ್ ಉಗ್ರವಾದಕ್ಕೂ ನಂಟಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕಾಗಿ 2012 ರಲ್ಲಿ ನಿಖಿಲ್ ಚಂದ್ರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಈ ಪ್ರಕರಣ ಹಿಂದೆಯೇ ಸುಖಾಂತ್ಯ ಕಂಡಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.