ರಾಷ್ಟ್ರೀಯ

ಅಲಹಬಾದ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 120 ಮಹಿಳೆಯರ ರಕ್ಷಣೆ

Pinterest LinkedIn Tumblr

raid-120ಅಲಹಬಾದ್: ಅಲಹಬಾದ್ ನ ಮೀರ್ ಗಂಜ್ ರೆಡ್ ಲೈಟ್ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 120 ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸುಮಾರು 5 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಬೃಹತ್ ವೇಶ್ಯಾವಾಟಿಕೆ ನಡೆಸುತ್ತಿದ್ದ 10 ಪುರುಷರು ಹಾಗೂ 5 ಮಹಿಳೆಯರನ್ನು ಬಂಧಿಸಿದ್ದಾರೆ.
20 ಮಕ್ಕಳು ಸೇರಿದಂತೆ 120 ಮಹಿಳೆಯರನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಾಗರನ್ ಐ-ನೆಕ್ಸ್ಟ್ ಎಂಬ ಸುದ್ಧಿಸಂಸ್ಥೆ ವರದಿ ಮಾಡಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಹತ್ತು ಜನ ಪುರುಷರು ಹಾಗೂ ಐವರು ಮಹಿಳೆಯರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Write A Comment