ರಾಷ್ಟ್ರೀಯ

ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ ಯುವಕನ ಬಂಧನ

Pinterest LinkedIn Tumblr

BIHAR-2
ಪಾಟ್ನಾ: ‘ಜನತಾ ದರ್ಬಾರ್’ ನಡೆಸುತ್ತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಯುವಕನೊಬ್ಬ ಚಪ್ಪಲಿ ಎಸೆಯಲು ಯತ್ನಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ಬಳಿ ತನ್ನ ಸಮಸ್ಯೆ ಹೇಳಿಕೊಳ್ಳಲು ಜನತಾ ದರ್ಬಾರ್ ಗೆ ಆಗಮಿಸಿದ್ದ ನಿತೀಶ್ ಕುಮಾರ್ ಎಂಬ ಹೆಸರಿನ ಯುವಕ ಇದ್ದಕ್ಕಿದಂತೆ ಸಿಎಂ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಯುವಕ ಅರ್ವಾಲ್ ಜಿಲ್ಲೆಯ ನಿವಾಸಿಯಾಗಿದ್ದು, ಆತನನ್ನು ಸಚಿವಾಲಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮನು ಮಹಾರಾಜ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

Write A Comment