ರಾಷ್ಟ್ರೀಯ

ಉತ್ತರಾಖಂಡ: ಬಹುಮತ ಸಾಬೀತಿಗೆ ಸುಪ್ರೀಂ ಸೂಚನೆ

Pinterest LinkedIn Tumblr

1048f55d45e5ac3c3e081ace771ನವದೆಹಲಿ: ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕೇಂದ್ರ ಸರ್ಕಾರ ಶುಕ್ರವಾರ ಸಮ್ಮತಿ ಸೂಚಿಸಿದೆ.
ಮೇ.10 ರಂದು ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಇದೇ ವೇಳೆ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ವೀಕ್ಷಕರನ್ನು ನೇಮಕ ಮಾಡುವಂತೆ ಕೋರ್ಟ್‌ಗೆ ಮನವಿ ಮಾಡಿದರು.
ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅನರ್ಹಗೊಂಡ ಕಾಂಗ್ರೆಸ್ ನ 9 ಶಾಸಕರು ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ವಿಶ್ವಾಸಮತ ದಿನದಂದು ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವಿ ಸಾಮರ್ಥ್ಯ ಪರೀಕ್ಷೆಯಾಗಲಿದೆ.

Write A Comment