ರಾಷ್ಟ್ರೀಯ

ಬಿಜೆಪಿಯಿಂದ ಪ್ರಜಾತಂತ್ರದ ಕಗ್ಗೊಲೆ: ಸೋನಿಯಾಗಾಂಧಿ

Pinterest LinkedIn Tumblr

13138987_1334002246616069_2603493398309504795_nನವದೆಹಲಿ (ಪಿಟಿಐ): ಭಾರತೀಯ ಜನತಾ ಪಕ್ಷ ಪ್ರಜಾತಂತ್ರವನ್ನು ಕಗ್ಗೊಲೆ ಮಾಡುತ್ತಿರುವುದಲ್ಲದೇ, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರ ಮೇಲೆ ಸುಳ್ಳಿನ ಆಪಾದನೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ವರಿಷ್ಠೆ ಸೋನಿಯಾಗಾಂಧಿ ಅವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.
ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಸುಳ್ಳು ಆರೋಪದ ವಿರುದ್ಧ ನಡೆಸಿದ ಜನತಂತ್ರ ಬಚಾವೊ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋನಿಯಾಗಾಂಧಿ ಮಾತನಾಡುತ್ತಿದ್ದರು.
ಜಂತರ್‌ ಮಂತರ್‌ನಲ್ಲಿ ಮಾತನಾಡುತ್ತಿದ್ದ ಅವರು ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದು ‘ಯಾರಿಂದಲೂ ಕಾಂಗ್ರೆಸ್‌ ಪಕ್ಷವನ್ನು ನಾಶಮಾಡಲು ಸಾಧ್ಯವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದರು.
ಬಿಜೆಪಿ ರಾಷ್ಟ್ರ ವಿರೋಧಿ ಪಕ್ಷವಾಗಿದೆ. ಪ್ರಜಾಪ್ರಭುತ್ವವನ್ನು ಗಣನೆಗೆ ತೆಗೆದುಕೊಳ್ಳದೆ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ದುರ್ಬಲಗೊಳಿಸುವ ಪ್ರಯತ್ನಮಾಡುತ್ತಿದೆ ಎಂದು ಸೋನಿಯಾಗಾಂಧಿ ಆರೋಪಿಸಿದರು.
ಪ್ರಧಾನಿ ಮೋಧಿ ಅವರು ಆಡಳಿತದ ನೆಪದಲ್ಲಿ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಸೋನಿಯಾ ದೂರಿದರು.
ನೀವು ಮೊದಲು ಸ್ವತಂತ್ರವಾಗಿ ಆಡಳಿತ ನಡೆಸುವುದನ್ನು ಕಲಿಯಿರಿ, ನಾಗಪುರದಿಂದಲ್ಲ ಎಂದು ಮೋದಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಗಣತಂತ್ರ ನಡಿಗೆ ಜಾಥದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಹಿರಿಯ ನಾಯಕಿ ಅಂಬಿಕಾ ಸೋನಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Write A Comment