
ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅದ್ಭುತವಾಗಿ ಆಡುತ್ತಿದ್ದಾರೆ. ಆದರೆ ಕೊಹ್ಲಿ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಪರಸ್ಪರ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಯುವರಾಜ್ ಸಿಂಗ್ ಹೇಳಿದ್ದಾರೆ.
ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಹಾಗೂ ಕೊಹ್ಲಿ ಶ್ರೇಷ್ಠ ಆಟಗಾರರಾಗಿದ್ದು, ಅವರ ನಡುವೆ ಹೋಲಿಕೆ ಸರಿಯಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಶತಕ ಬಾರಿಸಿ ಸಚಿನ್ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಕೊಹ್ಲಿ ಇಂತಹ ಸಾಧನೆಗಳನ್ನು ಮಾಡಲು ಇನ್ನು ಬಹಳ ಸಮಯ ಬೇಕಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅದೇ ತಂಡವನ್ನು ಪ್ರತಿನಿಧಿಸುತ್ತಿರುವ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಇಬ್ಬರು ಪ್ರಸ್ತುತ ಸರ್ವಶ್ರೇಷ್ಠ ಆಟಗಾರರು. ಉತ್ತಮ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಭವಿಷ್ಯದಲ್ಲಿ ಭಾರತ ಶ್ರೇಷ್ಠ ಆಟಗಾರನಾಗಬಲ್ಲ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.