ರಾಷ್ಟ್ರೀಯ

ನಿರಶನ ಕೈಬಿಟ್ಟ ಕನ್ಹಯ್ಯಾ ಕುಮಾರ್‌

Pinterest LinkedIn Tumblr

kkkkkನವದೆಹಲಿ (ಪಿಟಿಐ): ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
9 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಸ್ವಸ್ಥರಾಗಿದ್ದ ಕನ್ಹಯ್ಯಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು ನಿರಶನವನ್ನು ಕೈಬಿಟ್ಟಿದ್ದಾರೆ. ಆದರೆ ಕನ್ಹಯ್ಯಾ ಕುಮಾರ್‌ ಬೆಂಬಲಿಗರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಫೆ.9 ರಂದು ನಡೆದ ಘಟನೆ ಸಂಬಂಧ ವಿಶ್ವವಿದ್ಯಾಲಯ ನೇಮಿಸಿದ್ದ ಆಂತರಿಕ ಸಮಿತಿ ನೀಡಿದ ವರದಿ ಅನ್ವಯ ಶಿಸ್ತುಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ಕನ್ಹಯ್ಯಾ ಕುಮಾರ್, ಉಮರ್ ಖಾಲಿದ್ ಸೇರಿದಂತೆ 25 ವಿದ್ಯಾರ್ಥಿಗಳು ಒಂದು ವಾರದಿಂದ ನಿರಶನ ನಡೆಸುತ್ತಿದ್ದರು.

Write A Comment