ರಾಷ್ಟ್ರೀಯ

9 ಬಂಡಾಯ ಶಾಸಕರ ಅನರ್ಹತೆ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Pinterest LinkedIn Tumblr

Naini-Webನೈನಿತಾಲ್: ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಲಾದ 9 ಮಂದಿ ಕಾಂಗ್ರೆಸ್ ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ಮೇ 9ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಈ ಬಂಡಾಯ ಕಾಂಗ್ರೆಸ್ ಶಾಸಕರ ಹಣೆಬರಹ ಕುರಿತ ನಿಗೂಢತೆ ಶನಿವಾರ ಇನ್ನಷ್ಟು ಹೆಚ್ಚಿದೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಹರೀಶ್ ರಾವತ್ ಅವರು ವಿಶ್ವಾಸ ಮತ ಯಾಚನೆ ಮಾಡಲಿದ್ದು, ಬಂಡಾಯ ಶಾಸಕರು ಮತದಾನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

ಈ ಮಧ್ಯೆ ತಮ್ಮನ್ನು ಅನರ್ಹಗೊಳಿಸಿದ ವಿಧಾನಸಭಾಧ್ಯಕ್ಷರ ಕ್ರಮದ ವಿರುದ್ಧ 9 ಮಂದಿ ಬಂಡಾಯ ಶಾಸಕರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ಈ ಅರ್ಜಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಮಾಪ್ತಿಗೊಳಿಸಲಾಗಿದೆ. ಮೇ 9ರಂದು ಬೆಳಗ್ಗೆ 10.15ಕ್ಕೆ ತೀರ್ಪು ಪ್ರಕಟಿಸಲಿದ್ದೇನೆ’ ಎಂದ ನ್ಯಾಯಮೂರ್ತಿ ಯು.ಸಿ. ಧ್ಯಾನಿ ಈದಿನ ಪ್ರಕಟಿಸಿದರು.

Write A Comment