ಮನೋರಂಜನೆ

ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

Pinterest LinkedIn Tumblr

kohli-rcb

ಬೆಂಗಳೂರು: ಐಪಿಎಲ್ 9ನೇ ಆವೃತ್ತಿಯಲ್ಲಿ ಎರಡು ಶತಕಗಳನ್ನು ಸಿಡಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅದೇ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಶನಿವಾರ ಎಂಎಸ್ ಧೋನಿ ನಾಯಕತ್ವದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅಜೇಯ 108 ರನ್ ಗಳನ್ನು ಸಿಡಿಸಿದ್ದು, ತಂಡದ ಗೆಲುವಿಗೆ ಕಾರಣವಾಗಿತ್ತು.

ಇದೀಗ ಕೊಹ್ಲಿ ಐಪಿಎಲ್ ಆವೃತ್ತಿಯಲ್ಲಿ ಅತಿ ವೇಗವಾಗಿ 500 ರನ್ ಗಳಿಸಿದ ಖ್ಯಾತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

2010ರಲ್ಲಿ ಮುಂಬೈ ತಂಡದ ಪರ ಆಡುತ್ತಿದ್ದ ಸಚಿನ್ ತೆಂಡೂಲ್ಕರ್ ಅವರು 618ರನ್ ಹಾಗೂ 2011ರಲ್ಲಿ 553 ರನ್ ಸಿಡಿಸಿದ್ದರು. ಇದೀಗ ವಿರಾಟ್ ಕೊಹ್ಲಿ 8 ಇನ್ನಿಂಗ್ಸ್ 500 ರನ್ ಗಳನ್ನು ಪೂರೈಸಿ ದಾಖಲೆ ನಿರ್ಮಿಸಿದ್ದಾರೆ.

Write A Comment