ರಾಷ್ಟ್ರೀಯ

ನಕ್ಸಲರಿಂದ ಸ್ಫೋಟ: ಯೋಧ ಸಾವು

Pinterest LinkedIn Tumblr

blastರಾಯ್‌ಪುರ(ಪಿಟಿಐ): ಛತ್ತೀಸಗಡದ ಸುಖ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಎರಡು ಕಡೆ ಸುಧಾರಿತ ಸ್ಫೋಟಕ ಸಾಧನಗಳನ್ನು ಸ್ಫೋಟಿಸಿದ್ದು, ಜಿಲ್ಲಾ ಮೀಸಲು ಪಡೆಯ ಯೋಧರೊಬ್ಬರು ಮೃತಪಟ್ಟಿದ್ದು, ನಾಗರಿಕರು ಹಾಗೂ ವಾಹನ ಚಾಲಕ ಗಾಯಗೊಂಡಿದ್ದಾರೆ.
ಬೆಳಿಗ್ಗೆ 11.45ಕ್ಕೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ಇಲ್ಲಿ ಕರ್ತವ್ಯದಲ್ಲಿದ್ದ ಯೋಧ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಸುಖ್ಮಾ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮತ್ತೊಂದೆಡೆ ಸಂಭವಿಸಿದ ಸ್ಫೋಟದಲ್ಲಿ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಜೆಸಿಬಿ ವಾಹನ ಚಾಲಕ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Write A Comment