ರಾಷ್ಟ್ರೀಯ

ಉತ್ತರಾಖಂಡ ಬಿಕ್ಕಟ್ಟು ಅಂತ್ಯ: ‘ವಿಶ್ವಾಸ’ ಗೆದ್ದ ರಾವತ್; ರಾಷ್ಟ್ರಪತಿ ಆಳ್ವಿಕೆ ಹಿಂಪಡೆದ ಕೇಂದ್ರ

Pinterest LinkedIn Tumblr

Rawat-To

ನವದೆಹಲಿ (ಪಿಟಿಐ): ಕುತೂಹಲಕರ ಬೆಳವಣಿಗೆಯಲ್ಲಿ ಉತ್ತರಾಖಂಡ ವಿಧಾನಸಭೆಯಲ್ಲಿ ಹರೀಶ್ ರಾವತ್ ಅವರು ವಿಶ್ವಾಸ ಮತ ಗೆದ್ದಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಒಪ್ಪಿಕೊಂಡಿದೆ.

ಈ ವಿಷಯವನ್ನು ಸುಪ್ರೀಂ ಕೋರ್ಟ್‌ ತಿಳಿಸಿರುವ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, ಉತ್ತರಾಖಂಡದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ, ಮಂಗಳವಾರ ನಡೆದ ಬಹುಮತ ಪರೀಕ್ಷೆಯಲ್ಲಿ 61 ಶಾಸಕರ ಪೈಕಿ ರಾವತ್ ಅವರಿಗೆ 33 ಸದಸ್ಯರು ಬೆಂಬಲಿಸಿದ್ದಾರೆ ಎಂದು ಸುಪ್ರೀಂಕೋರ್ಟ್‌ ಪ್ರಕಟಿಸಿದೆ.

ರಾಷ್ಟ್ರಪತಿ ಆಳ್ವಿಕೆ ಹಿಂಪಡೆದ ಕೂಡಲೇ ರಾವತ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಆದೇಶವನ್ನು ರಾವತ್ ಪರ ವಕೀಲ ಕಪಿಲ್ ಸಿಬಲ್ ಅವರು ಸ್ವಾಗತಿಸಿದ್ದಾರೆ.

ಕಾಂಗ್ರೆಸ್ ಸಂಭ್ರಮಾಚರಣೆ: ಈ ಬೆನ್ನಲ್ಲೆ ಕಾಂಗ್ರೆಸ್ ಸಂಭ್ರಮಾಚರಣೆ ನಡೆಸಿದೆ. ಜತೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ರಾಹುಲ್ ಟ್ವೀಟ್‌: ‘ಪ್ರಜಾಪ್ರಭುತ್ವದ ಕೊಲೆಯನ್ನು ಈ ದೇಶದ ಜನರು ಹಾಗೂ ನಮ್ಮ ಪಿತಾಮಹರು ಕಟ್ಟಿದ
ಸಂಸ್ಥೆಗಳು ಒಪ್ಪುವುದಿಲ್ಲ. ಮೋದಿ ಇದರಿಂದ ಪಾಠ ಕಲಿಯುವ ಭರವಸೆ ಇದೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

Write A Comment