ರಾಷ್ಟ್ರೀಯ

ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಬಿಎಸ್‌ಎಫ್ ಯೋಧ ಸಾವು

Pinterest LinkedIn Tumblr

ugraಶ್ರೀನಗರ, ಮೇ 11- ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಗಡಿಭದ್ರತಾ ಪಡೆ (ಬಿಎಸ್‌ಎಫ್) ಯೋಧನೊಬ್ಬ ಹುತಾತ್ಮನಾಗಿದ್ದಾನೆ. ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಓಂವೀರ್‌ಸಿಂಗ್‌ನನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಕುಪ್ವಾರ ಜಿಲ್ಲೆ ಹಂದ್ವಾರಾ ಪ್ರದೇಶದ ವತ್ಸಾರ್ ಅರಣ್ಯದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧಕಾರ್ಯ ಆರಂಭಿಸಿದ್ದವು. ಮಧ್ಯರಾತ್ರಿ ಆರಂಭವಾದ ಶೋಧ ಕಾರ್ಯ, ಗುಂಡಿನ ಚಕಮಕಿ ಬೆಳಗ್ಗೆ 10 ಗಂಟೆವರೆಗೂ ನಡೆದಿತ್ತು. ಹೆಚ್ಚಿನ ಮಾಹಿತಿಗಳಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Write A Comment