ರಾಷ್ಟ್ರೀಯ

ಗಡಿ ಪ್ರದೇಶದಲ್ಲಿ 10 ಕೋಟಿಗೂ ಹೆಚ್ಚು ಹೆರಾಯಿನ್ ವಶ

Pinterest LinkedIn Tumblr

borderಶ್ರೀನಗರ, ಮೇ 14- ಜಮ್ಮು-ಕಾಶ್ಮೀರದ ಜಮ್ಮು ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ (ಐಬಿ) ಪ್ರದೇಶದಲ್ಲಿ ಗಡಿಭದ್ರತಾ ಪಡೆ (ಬಿಎಸ್‌ಎಫ್) ಯೋಧರು 10 ಕೋಟಿ ರೂ.ಗಳಿಗೂ ಹೆಚ್ಚು ಪ್ರಮಾಣದ ಹೆರಾಯಿನ್ (ಮಾದಕ ವಸ್ತು)ವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಂತಾರಾಷ್ಟ್ರೀಯ ಗಡಿಯ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಪಾಕಿಸ್ಥಾನದಿಂದ ಭಾರತದೊಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಎಫ್‌ಯಾರ್ ದಾಖಲಿಸಿಕೊಳ್ಳಲಾಗಿದೆ. ಇನ್ನೂ ಕೂಡ ಕೆಲವರನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ಮುಂದುವರೆದಿದೆ.

Write A Comment