ರಾಷ್ಟ್ರೀಯ

ತೆಲಂಗಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 15 ಮಂದಿ ದುರ್ಮರಣ

Pinterest LinkedIn Tumblr

tele1

ಅದಿಲಾಬಾದ್: ದೇವಾಲಯಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ 15 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರ ನಡೆದಿದೆ.

ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಬಾಸರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 15 ಸಾವನ್ನಪ್ಪಿದ್ದಾರೆ. ಟಿಪ್ಪರ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ್ದು, ಆರು ಮಕ್ಕಳು, ಐವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಮೂಲತಃ ಮಹಾರಾಷ್ಟ್ರದವರಾಗಿದ್ದು, ನಿಜಾಮಬಾದ್ ನ ನವೀಪೇಟ್ ನಲ್ಲಿ ಕಳೆದ ಎರಡು ವರ್ಷಗಳಿಂದ ವಾಸವಿದ್ದರು. ಎಲ್ಲರೂ ನಿಜಾಮಬಾದ್ ನಲ್ಲಿರುವ ಆಡಲ್ಲಿ ಪೋಚಮ್ಮ ದೇವಾಲಯಕ್ಕೆ ತೆರುಳುತ್ತಿದ್ದರು. ಆಟೋದಲ್ಲಿ 18 ಮಂದಿ ಪ್ರಯಾಣಿಸುತ್ತಿದ್ದರು. ಇನ್ನು ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಳಿಸಿದ್ದಾರೆ.

Write A Comment