
ಗುಂಟೂರು: ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 7 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಡಿ ಸಿಲುಕಿ 7 ಜನರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತಪಟ್ಟವರಲ್ಲಿ ನಾಲ್ವರು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಮಾಲ್ ನಿರ್ಮಿಸಲು ಪೋಲ್ ಗಾಗಿ 30 ಅಡಿ ಆಳ ತೋಡಲಾಗಿತ್ತು. ಅಲ್ಲಿ ಕಾಂಕ್ರಿಟ್ ಹಾಕಲು ರಾತ್ರಿ ಒಳಗೆ ಇಳಿದಾಗ, ಮೇಲಿನಿಂದ ಕಟ್ಟಡ ಕುಸಿದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರ ತಲಾ ರು.5 ಲಕ್ಷ ಪರಿಹಾರ ಘೋಷಿಸಿದೆ.