
ಮುಜಾಫರ್ನಗರ: ಅಪ್ರಾಪ್ತ ಬಾಲಕಿ ಮೇಲೆ ಆಕೆಯ ತಂದೆಯೇ ಅತ್ಯಾಚಾರವೆಸಗಿದ್ದು, ಇದೀಗ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬುದಾನಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ತಾಯಿ ಕೆಲಸಕ್ಕೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಬಾಲಕಿಯೊಬ್ಬಳೇ ಮನೆಯಲ್ಲಿದ್ದಾಗ ತಂದೆಯೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ತಾಯಿಯೇ ಪೊಲೀಸರಿಗೆ ದೂರು ನೀಡಿದ್ದಾಳೆ.
ಕಳೆದ ಜನವರಿಯಿಂದ ಆರೋಪಿ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದು, ಬಾಲಕಿ ಗರ್ಭಿಣಿಯಾದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಆರೋಪಿ ಬಾಲಕಿಯನ್ನು ಬೆದರಿಸಿದ್ದ.
ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
Comments are closed.