ರಾಷ್ಟ್ರೀಯ

ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಮಳೆ

Pinterest LinkedIn Tumblr

rainಚೆನ್ನೈ/ಹೈದರಾಬಾದ್‌ : ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಚೆನ್ನೈ ನಲ್ಲಿ ಮತ್ತೆ ಪ್ರವಾಹ ಉಂಟಾಗುವ ಸಾಧ್ಯೆತೆಗಳಿವೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಚೆನ್ನೈ ಹಾಗೂ ಸುತ್ತಲಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಚಂಡಮಾರುತ ಭೀತಿ ಎದುರಾಗಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಲ್ಲಿಯವರೆಗೂ ಯಾವುದೇ ಅನಾಹುತಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Comments are closed.