ರಾಷ್ಟ್ರೀಯ

ಉತ್ತರಾಖಂಡದ 9 ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

Pinterest LinkedIn Tumblr

uttarkhand-rebels

ನವದೆಹಲಿ: ಉತ್ತರಾಖಂಡ ಸರ್ಕಾರದಿಂದ ಬಂಡಾಯವೆದ್ದಿದ್ದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಸೇರಿದಂತೆ 9 ಕಾಂಗ್ರೆಸ್ ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಂಡಾಯವೆದ್ದಿದ್ದ ಶಾಸಕರಿಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿರಲಿಲ್ಲ. ಹರೀಶ್ ರಾವತ್ ವಿಶ್ವಸಮತ ಯಾಚನೆಯಲ್ಲಿ 33-28 ಮತಗಳ ಅಂತರದಿಂದ ಗೆಲುವು ಸಾಧಿಸಿ ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು.

ರಾಜ್ಯ ಬಜೆಟ್ ವಿರೋಧಿಸಿ 9 ಕಾಂಗ್ರೆಸ್ ಶಾಸಕರು ಬಂಡಾಯವೆದ್ದಿದ್ದರು. ಹಾಗಾಗಿ ಹರೀಶ್ ರಾವತ್ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಕೇಂದ್ರ ಸರ್ಕಾರ ಮಾರ್ಚ್ 27 ರಂದು ರಾಷ್ಟ್ರಪತಿ ಆಡಳಿತ ಹೇರಿತ್ತು. ಆ ನಂತರ ನಡೆದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಲ್ಲಿ ವಿಶ್ವಾಸ ಮತ ಯಾಚನೆ ನಡೆದಿತ್ತು.

Comments are closed.