ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ 2ನೇ ಬಾರಿ ಮಮತಾ ಬ್ಯಾನರ್ಜಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ

Pinterest LinkedIn Tumblr

mamata-banerjee1

ಕೋಲ್ಕತ್ತಾ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪಶ್ಚಿಮ ಬಂಗಾಳದ ಮತದಾರರು ಕೈ ಹಿಡಿದಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭೆ 294 ಕ್ಷೇತ್ರಗಳನ್ನು ಒಳಗೊಂಡಿದ್ದು, ಅದರಲ್ಲಿ ಟಿಎಂಸಿ ಪಕ್ಷ ಭರ್ಜರಿ 213 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಸಿಪಿಎಂಗೆ ಭಾರಿ ಮುಖಭಂಗವಾಗಿದ್ದು, ಕೇವಲ 71 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಪಡೆದರೆ, 3 ಸ್ಥಾನಗಳಲ್ಲಿ ಇತರರು ಮುನ್ನಡೆ ಪಡೆದಿದ್ದಾರೆ.

ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 148 ಸ್ಥಾನಗಳ ಅವಶ್ಯಕತೆ ಇದ್ದು, ಟಿಎಂಸಿ ಪಕ್ಷ ಅದಾಗಲೇ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Comments are closed.