ರಾಷ್ಟ್ರೀಯ

ಸಿಪಿಐ(ಎಂ) ಕಚೇರಿಗೆ ತೃಣಮೂಲ ಕಾರ್ಯಕರ್ತರಿಂದ ಬೆಂಕಿ

Pinterest LinkedIn Tumblr

1-WB-1-webಅಸ್ನಸೋಲ್: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಮತ್ತೆ ಅಧಿಕಾರದ ಗದ್ದುಗೆಗೆ ಏರಿದೆ. ವಿಜಯದ ಸಂಭ್ರಮಾಚರಣೆ ನಡೆಸುವ ವೇಳೆ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಿಪಿಐ(ಎಂ) ಕಚೇರಿಗೆ ಬೆಂಕಿ ಹಚ್ಚಿದ್ದಾರೆ.

ಸಂಭ್ರಮಾಚರಣೆಯಲ್ಲಿ ತೊಡಗಿದ್ದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಧ್ಯಾಹ್ನ 3.30ರ ಸುಮಾರಿಗೆ ಅಸ್ನಸೋಲ್ನಲ್ಲಿರುವ ಸಿಪಿಐ(ಎಂ) ಕಚೇರಿಗೆ ತೆರಳಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ನಂತರ ಕಚೇರಿಗೆ ಬೆಂಕಿ ಹಚ್ಚಿದ್ದಾರೆ.

ಚುನಾವಣೆಯ ಸಂದರ್ಭದಲ್ಲೂ ಸಹ ರಾಜ್ಯದ ಹಲವೆಡೆ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿದ್ದವು.

Comments are closed.