ರಾಷ್ಟ್ರೀಯ

ಪುದುಚೆರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ

Pinterest LinkedIn Tumblr

1-Puducherry-Congress-webಪುದುಚೆರಿ: ಪುದುಚೆರಿಯಲ್ಲಿ ಆಡಳಿತಾರೂಢ ಎಐಎನ್ಆರ್ಸಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು 17 ಸ್ಥಾನಗಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಿದ್ಧತೆ ನಡೆಸಿವೆ.

30 ವಿಧಾಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 14 ಮತ್ತು ಡಿಎಂಕೆ 1ರಲ್ಲಿ ಜಯಗಳಿಸಿವೆ. ಜತೆಗೆ ಕಾಂಗ್ರೆಸ್ ಮತ್ತು ಡಿಎಂಕೆ ತಲಾ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಆಡಳಿತಾರೂಢ ಎಐಎನ್ಆರ್ಸಿ ಪಕ್ಷ ಕೇವಲ 8 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಎಐಎಡಿಎಂಕೆ 4 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ.

ಆದರೆ ಕಾಂಗ್ರೆಸ್ನ ಹಿರಿಯ ನಾಯಕ ಇ. ವಲ್ಸರಾಜ್ ಮಾಹೆ ಕ್ಷೇತ್ರದಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ.

Comments are closed.