ರಾಷ್ಟ್ರೀಯ

ನೀಟ್‌ ಪರೀಕ್ಷೆ ಮುಂದೂಡಿಕೆ: ಕೇಂದ್ರ ಸುಗ್ರಿವಾಜ್ಞೆ

Pinterest LinkedIn Tumblr

neeeetನವದೆಹಲಿ: ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ (ನೀಟ್)ಯನ್ನು ಒಂದು ವರ್ಷ ಮುಂದೂಡಿ ಕೇಂದ್ರ ಸರ್ಕಾರ ಶುಕ್ರವಾರ ಸುಗ್ರಿವಾಜ್ಞೆ ಹೊರಡಿಸಿದೆ.

ನೀಟ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ ಎಂದು ಕೆಲವು ರಾಜ್ಯ ಸರ್ಕಾರಗಳು ಮನವಿ ಮಾಡಿದ್ದರಿಂದ ಕೇಂದ್ರ ಸರ್ಕಾರ ಈ ಸುಗ್ರಿವಾಜ್ಞೆ ಹೊರಡಿಸಿದೆ. ಕೇಂದ್ರದ ಈ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

ರಾಜ್ಯಗಳು ಹಾಗೂ ಖಾಸಗಿ ಕಾಲೇಜುಗಳು ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸಹ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು.

Comments are closed.