ರಾಷ್ಟ್ರೀಯ

ತೆಲಂಗಾಣದಲ್ಲಿ ಐವರು ದುಷ್ಕರ್ಮಿಗಳಿಂದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Pinterest LinkedIn Tumblr

gang rape

ಹೈದರಾಬಾದ್: ಐವರು ದುಷ್ಕರ್ಮಿಗಳು 26 ವರ್ಷ ವಯಸ್ಸಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಐವರು ದುಷ್ಕರ್ಮಿಗಳು ನರಸಾಪುರ್‌ನಿಂದ ಕರೆದೊಯ್ದು, ಮಾರ್ಗ ಮಧ್ಯೆ ವಾಹನ ನಿಲ್ಲಿಸಿ ಸಾಮೂಹಿಕ ಅತ್ಯಾಚಾರ ನಡೆಸಿದರು ಎಂದು ಅರೆ ಪ್ರಜ್ಞಾವಸ್ಥೆಯಲ್ಲಿರುವ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಘಟನೆ ಬಳಿಕೆ ಯುವತಿ ಸಂಗಾರೆಡ್ಡಿ ನಗರದ ಆಸ್ಪತ್ರೆಗೆ ತಾನೇ ದಾಖಲಾಗಿದ್ದಾಳೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

Comments are closed.