ಮನೋರಂಜನೆ

ಬಿಸಿಸಿಐ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧ ಆಯ್ಕೆ

Pinterest LinkedIn Tumblr

anurag

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ವಿಶೇಷ ಮಹಾಸಭೆಯಲ್ಲಿ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 1963ರ ಬಳಿಕ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುತ್ತಿರುವ ಅತಿ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ.

ವಿಶೇಷ ಮಹಾಸಭೆಯಲ್ಲಿ ಭಾರತ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷ ಸೌರವ್ ಗಂಗೂಲಿ, ಅನುರಾಗ್ ಠಾಕೂರ್ ಸೇರಿದಂತೆ ಉಳಿದೆಲ್ಲಾ ಸದಸ್ಯರು ಪಾಲ್ಗೊಂಡಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ಸ್ವತಂತ್ರ ಚೇರ್ಮನ್ ಆಗಿ ಶಶಾಂಕ್ ಮನೋಹರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಹುದ್ದೆ ತೆರವುಕೊಂಡಿತ್ತು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಅನುರಾಗ್ ಠಾಕೂರ್ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಸಿಎಬಿ, ಅಸ್ಸಾಂ, ತ್ರಿಪುರ, ಎನ್ಸಿಸಿ ಹಾಗೂ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಗಳು ಠಾಕೂರ್ ಅವರನ್ನು ಬೆಂಬಲಿಸಿದ್ದವು.

ಶಿರ್ಕೆ ನೂತನ ಕಾರ್ಯದರ್ಶಿ: ಅನುರಾಗ್ ಠಾಕೂರ್ ರಾಜೀನಾಮೆಯಿಂದ ತೆರವಾಗಿರುವ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಅಜಯ್ ಶಿರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಶಿರ್ಕೆ ಅವರು ಈಗಾಗಲೇ ಬಿಸಿಸಿಐನ ಹಲವು ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Comments are closed.