ರಾಷ್ಟ್ರೀಯ

ನಜಾಫ್​ಗಢ ಪ್ರದೇಶದಲ್ಲಿ ಅಪಘಾತಕ್ಕೀಡಾದ ಏರ್ ಆಂಬುಲೆನ್ಸ್; ಇಬ್ಬರಿಗೆ ಗಂಭೀರ

Pinterest LinkedIn Tumblr

amb

ನವದೆಹಲಿ: ಏಳರಿಂದ ಎಂಟು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ನಜಾಫ್ಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಏಳೆಂಟು ಮಂದಿ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ ಈ ಕುರಿತು ಮಾಹಿತಿ ನೀಡಿದ್ದು, ವಿಮಾನ ಅಪಘಾತ ಸಂಭವಿಸುವುದಕ್ಕೂ ಮೊದಲು ಎರಡು ಎಂಜಿನ್ಗಳು ಕಾರ್ಯ ಸ್ಥಗಿತಗೊಳಿಸಿತ್ತು. ಇದರಿಂದಾಗಿ ಪಟನಾದ ಗ್ರಾಮವೊಂದರ ಬಳಿ ಭೂಸ್ಪರ್ಶ ಮಾಡಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದೆ.

ಘಟನಾ ಸ್ಥಳದಲ್ಲಿ ಸ್ಥಳೀಯ ನಿವಾಸಿಗಳು ಜಮಾಯಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಗೊಂಡವರಿಗೆ ಸ್ಥಳದಲ್ಲೇ ತುರ್ತು ಚಿಕಿತ್ಸೆ ನೀಡಿ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಮಾನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಮಾಡಿತ್ತು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Comments are closed.