ರಾಷ್ಟ್ರೀಯ

ಕಾರ್ಖಾನೆಯಲ್ಲಿ ಸ್ಫೋಟ: 3 ಕಾರ್ಮಿಕರ ಸಾವು

Pinterest LinkedIn Tumblr

Spotatatata

ಥಾಣೆ (ಪಿಟಿಐ): ಥಾಣೆ ಜಿಲ್ಲೆಯ ಡೊಂಬಿವಲಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಮೂರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದರಿಂದ ಹೆಚ್ಚಿನ ಅನಾಹುತವಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡ ಬಹುತೇಕ ಹಾನಿಗೊಂಡಿದೆ. ಸ್ಫೋಟಗೊಂಡ ಕೂಡಲೆ ಕಾರ್ಖಾನೆಯಿಂದ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

12ಕ್ಕೂ ಹೆಚ್ಚು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.