ರಾಷ್ಟ್ರೀಯ

ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಭಗತ್ ಸಿಂಗ್ ಮೊಮ್ಮಗ

Pinterest LinkedIn Tumblr

BHAGATH

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಮೊಮ್ಮಗ ಅಭಿಜಿತ್ ಸಿಂಗ್ ಸಂಧು (22) ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ರಾಮಪುರ ಬುಶಹರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಅಭಿಜಿತ್ ಅವರು ಮೋಟಾರು ಬೈಕಿನಲ್ಲಿ ಸಂಚರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಭಿಜಿತ್ ಅವರ ತಂದೆ ಅಭಯ್ ಸಿಂಗ್ ಅವರು ಭಗತ್ ಸಿಂಗ್ ಅವರ ಕಿರಿಯ ಪುತ್ರರಾಗಿದ್ದರು.

ಅಭಿಜಿತ್ ಅವರ ಸಾವಿನ ಕುರಿತು ಗಣ್ಯರು ಕಂಬನಿ ಮಿಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬಕ್ಕೆ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Comments are closed.