ಮನೋರಂಜನೆ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳಾಪಟ್ಟಿ ಬಿಡುಗಡೆಮಾಡಿದ ಐಸಿಸಿ; ಭಾರತಕ್ಕೆ ಮೊದಲ ಎದುರಾಳಿ ಪಾಕ್

Pinterest LinkedIn Tumblr

IND-vs-PAK

ದುಬೈ: ಹಾಲಿ ಚಾಂಪಿಯನ್ ಭಾರತ 2017ನೇ ಸಾಲಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು 2017ರ ಜೂನ್ 4ರಂದು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬುಧವಾರ ಘೋಷಿಸಿದೆ.

ಬಿ ಗುಂಪಿನಲ್ಲಿ ಭಾರತದ ಜೊತೆಗೆ ಪಾಕಿಸ್ತಾನ, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾವಿದ್ದು, ಪಾಕಿಸ್ತಾನದ ನಂತರ ಭಾರತ ಜೂನ್ 8ರಂದು ಶ್ರೀಲಂಕಾ ವಿರುದ್ಧ ಆಡಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಜೂನ್ 11ರಂದು ಲಂಡನ್ ನ ಒವಲ್ ನಲ್ಲಿ ನಡೆಯಲಿದೆ. ಇನ್ನೊಂದು ಗುಂಪಿನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿವೆ.

ಒವಲ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಆರಂಭಿಕ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಬಾಂಗ್ಲಾದೇಶ ವಿರುದ್ಧ ಸೆಣಸಲಿದೆ. ಸೆಮಿ ಫೈನಲ್ ಪಂದ್ಯಗಳು ಇಂಗ್ಲೆಂಡಿನ ಕಾರ್ಡಿಫ್ ನಲ್ಲಿ ಜೂನ್ 14 ಮತ್ತು 15ರಂದು, ಅಂತಿಮ ಪಂದ್ಯ ಜೂನ್ 18ರಂದು ಒವಲ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಐಸಿಸಿ ತಿಳಿಸಿದೆ.

Comments are closed.