ಶ್ರೀನಗರ, ಜೂ.15- ಪಾಕ್ ಆಕ್ರಮಿತ ಕಾಶ್ಮೀರದ ನೆಲದಿಂದ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ)ಯಲ್ಲಿ ಒಳ ನುಸುಳುವ ಪ್ರಯತ್ನ ನಡೆಸಿದ್ದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧನೊಬ್ಬ ಹುತಾತ್ಮನಾಗಿದ್ದು, ಒಬ್ಬ ನುಸುಳುಕೋರ ಗುಂಡಿಗೆ ಬಲಿಯಾಗಿದ್ದಾನೆ.
ಬೆಳಗಿನ ಜಾವ ಆರಂಭವಾದ ನುಸುಳುಕೋರರೊಂದಿಗಿನ ಗುಂಡಿನ ಚಕಮಕಿ ಇನ್ನೂ ಕೂಡ ಮುಂದುವರಿದಿದ್ದು, ಉಗ್ರರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿರಬಹುದು ಎಂದು ಸೇನಾ ಪಡೆಗಳು ಶಂಕಿಸಿವೆ. ಗುಂಡಿನ ದಾಳಿಯಲ್ಲಿ ಇತರ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದಕ್ಕೂ ಮೊದಲು ನಿನ್ನೆ ರಾತ್ರಿ ಕುಪ್ವಾರಾ ಜಿಲ್ಲೆಯ ಮುಚ್ಚಿಲ್ ಸೆಕ್ಟರ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದ ಎಂದು ಸೇನಾಪಡೆ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.