ರಾಷ್ಟ್ರೀಯ

ರಾಹುಲ್ ಗಾಂಧಿ@46; ಟ್ವೀಟ್ ಮಾಡಿ ಶುಭ ಹಾರೈಸಿದ ಪ್ರಧಾನಿ ಮೋದಿ

Pinterest LinkedIn Tumblr

500384-modi-rahulನವದೆಹಲಿ: 46ನೇ ವರ್ಷಕ್ಕೆ ಕಾಲಿಟ್ಟ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ಮೋದಿ ಅವರು, ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಟ್ವಿಟರ್ ನಲ್ಲಿ ಶುಭಾಶಯ ಕೋರಿರುವ ಪ್ರಧಾನ ಮೋದಿಯವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು, ನಿಮಗೆ ದೇವರು ದೀರ್ಘ ಹಾಗೂ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದರು.

ಕಾಂಗ್ರೆಸ್ ಯುವರಾಜನ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಭರ್ಜರಿಯಾಗಿ ಆಚರಿಸಿದರು.
-ಉದಯವಾಣಿ

Comments are closed.