ರಾಷ್ಟ್ರೀಯ

ನಕ್ಸಲರಿಂದ ಬಾಂಬ್ ದಾಳಿ, ಸಿಆರ್​ಪಿಎಫ್ ಕಮಾಂಡೋ ಹುತಾತ್ಮ

Pinterest LinkedIn Tumblr

1-Bihar-webಪಟನಾ: ಬಿಹಾರದ ಔರಂಗಾಬಾದ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಹುದುಗಿಸಿಟ್ಟಿದ್ದ ಸುಧಾರಿತ ಸ್ಪೋಟಕ (ಐಇಡಿ ಬಾಂಬ್) ಸ್ಪೋಟಗೊಂಡ ಪರಿಣಾಮ ಓರ್ವ ಸಿಆರ್ಪಿಎಫ್ ಕಮಾಂಡೋ ಮೃತನಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಔರಂಗಾಬಾದ್ ಜಿಲ್ಲೆಯ ಗಂಜೋಯಿ ಪಹರ್ ಪ್ರದೇಶದ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಆರ್ಪಿಎಫ್ನ 205ನೇ ಕೋಬ್ರಾ ತಂಡದ ಮೇಲೆ ಭಾನುವಾರ ಮಧ್ಯಾಹ್ನ ಬಾಂಬ್ ದಾಳಿ ನಡೆದಿದೆ. ದಾಳಿಯಲ್ಲಿ ಕಮಾಂಡೋ ಬೆಟಾಲಿಯನ್ ಫಾರ್ ರಿಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಯ ಓರ್ವ ಯೋಧ ಹುತಾತ್ಮರಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಕ್ಸಲರು ಮತ್ತು ಸಿಆರ್ಪಿಎಫ್ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ನಂತರ ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸಿಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.