ರಾಷ್ಟ್ರೀಯ

ಕಾಶ್ಮೀರ: ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ

Pinterest LinkedIn Tumblr

fpkennw8ಶ್ರೀನಗರ(ಪಿಟಿಐ): ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ.

ದೋಬವಾನ್‌ ಅರಣ್ಯ ಪ್ರದೇಶದಲ್ಲಿ ಅಡಗಿರುವ ಉಗ್ರರ ಶೋಧಕ್ಕೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ಕೈಗೊಂಡಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರಳಿಸಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.