ರಾಷ್ಟ್ರೀಯ

ಎದೆನೋವು: ಆಸ್ಪತ್ರೆಗೆ ದಾಖಲಾದ ಉಮಾ ಭಾರತಿ

Pinterest LinkedIn Tumblr

uma-bharatiನವದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹಿರಿಯ ವೈದ್ಯ ಡಾ.ರಾಜೇಶ್ ಮಲ್ಹೋತ್ರಾ ತಿಳಿಸಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯಲ್ಲಿನ ತಮ್ಮ ಕಚೇರಿಯಲ್ಲಿ ನಿನ್ನೆ ಸಾಯಂಕಾಲ ಕೆಲಸದಲ್ಲಿ ಮಗ್ನರಾಗಿದ್ದ ವೇಳೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಜಲಸಂಪನ್ಮೂಲ ಸಚಿವಾಲಯ ವಕ್ತಾರ ಸಮೀರ್ ಸಿನ್ಹಾ ತಿಳಿಸಿದ್ದಾರೆ.

Comments are closed.