ಥಾಣೆ (ಪಿಟಿಐ): ಎಟಿಎಂ ಘಟಕಗಳಿಗೆ ಹಣ ಪೂರೈಸುವ ಕಂಪೆನಿಯಲ್ಲಿ ದುಷ್ಕರ್ಮಿಗಳು ಮಂಗಳವಾರ ₹ 12 ಕೋಟಿ ದೋಚಿದ್ದಾರೆ.
ಬೆಳಗಿನಜಾವ 3 ಗಂಟೆ ಸುಮಾರಿಗೆ ಥಾಣೆಯ ತೀನ್ ಹತ್ ನಾಕ ಬಳಿ ಇರುವ ಕಂಪೆನಿಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ಥಾಣೆ ಠಾಣೆಯ ಇನ್‌ಸ್ಪೆಕ್ಟರ್ ಸುಖದ ನರ್ಕಾರ್ ಹೇಳಿದ್ದಾರೆ.
ಕಂಪೆನಿಯ ಆವರಣದಲ್ಲಿ ಯಾವುದೇ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ. ಹೀಗಾಗಿ ದುಷ್ಕರ್ಮಿಗಳ ಸುಳಿವು ಲಭ್ಯವಾಗಿಲ್ಲ ಎಂದು ಅವರು ಹೇಳಿದರು.
ಘಟನೆ ಬಳಿಕ ಥಾಣೆ ಕಮಿಷನರ್ ಪರಂಬೀರ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Comments are closed.