ತಿರುವನಂತಪುರಂ: ಕೇರಳದ ಕಾಸರಗೋಡು ಮತ್ತು ಪಾಲಕ್ಕಾಡ್ ಜಿಲ್ಲೆಗಳಿಂದ ಮಧ್ಯಪ್ರಾಚ್ಯ ದೇಶಗಳಿಗೆ ತೆರೆಳಿ ಅಲ್ಲಿ ನಾಪತ್ತೆಯಾಗಿರುವ ಯುವಕ–ಯುವತಿಯರು ಐಎಸ್ ಉಗ್ರಗಾಮಿ ಸಂಘಟನೆ ಸೇರಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆಯ ಮೂಲಗಳು ದೃಢೀಕರಿಸಿವೆ. ಕೇರಳದಿಂದ ಇಪ್ಪತ್ತಕ್ಕೂ ಹೆಚ್ಚು ಮಂದಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಶಂಕಿತರ ವಾಟ್ಸಾಪ್, ಫೇಸ್‍ಬುಕ್, ಇಮೇಲ್ ಸಂದೇಶಗಳನ್ನು ಪರಿಶೀಲಿಸಿದಾಗ ಈ ಮಾಹಿತಿ ಲಭಿಸಿದೆ. ಅಷ್ಟೇ ಅಲ್ಲದೆ ನಕಲಿ ಪ್ರೊಫೈಲ್‍ಗಳಿಂದ ಇವರು ಸಂದೇಶಗಳನ್ನು ರವಾನೆ ಮಾಡುತ್ತಿದ್ದಾರೆ ಎಂದು ಗುಪ್ತಚರ ಮೂಲಗಳು ಹೇಳಿವೆ.
ಕೇರಳದಿಂದ ನಾಪತ್ತೆಯಾದವರಲ್ಲಿ ಐದು ಮಂದಿಗೆ ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಇದೆ. ಈ ಬಗ್ಗೆ ಪ್ರಾಥಮಿಕ ವರದಿಯನ್ನು ಡಿಜಿಪಿ ಲೋಕನಾಥ್ ಬೆಹೆರಾ ಅವರಿಗೆ ನೀಡಲಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ತಿರುವನಂತಪುರಂ, ಕಾಸರಗೋಡು, ಪಾಲಕ್ಕಾಡ್ ಜಿಲ್ಲೆಗಳಿಂದ ಈವರೆಗೆ 18 ಮಂದಿ ನಾಪತ್ತೆಯಾಗಿದ್ದಾರೆ. ಇದರಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ 6 ಮಹಿಳೆಯರು ಮತ್ತು ಮೂರು ಮಕ್ಕಳು ಇದ್ದಾರೆ.
Comments are closed.