ನವದೆಹಲಿ: ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರಿಗೆ ಅವಕಾಶ ನೀಡಲಾಗಿತ್ತೆಂದು ಬಿಸಿಸಿಐನ ಸಲಹಾ ಸಮಿತಿ ಸದಸ್ಯರಾದ ಸೌರವ್ ಗಂಗೂಲಿ ಹೇಳಿದ್ದಾರೆ.
ಗಂಗೂಲಿ ಸೇರಿದಂತೆ ಇತರ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಸಮಿತಿಯು ಜೂನ್ ತಿಂಗಳಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಸಿತ್ತು. ಆಗಲೇ ಶಾಸ್ತ್ರಿ ಅವರಿಗೆ ಬ್ಯಾಟಿಂಗ್ ಕೋಚ್ ಹುದ್ದೆ ನೀಡಲು ನಿರ್ಧರಿಸಲಾಗಿತ್ತು ಎಂದು ಗಂಗೂಲಿ ಹೇಳಿದ್ದಾರೆ.
ಟೀಂ ಇಂಡಿಯಾ ಕೋಚ್ ಹುದ್ದೆ ಕೈತಪ್ಪಿದ್ದರಿಂದ ರವಿಶಾಸ್ತ್ರಿ ಹಾಗೂ ಗಂಗೂಲಿ ನಡುವೆ ತೀವ್ರ ವಾಗ್ಸಮರ ನಡೆದಿತ್ತು.
Comments are closed.