ರಾಷ್ಟ್ರೀಯ

ಯುಪಿಗೆ ರಾಜ್ ಬಬ್ಬರ್ “ಕೈ” ಅಧ್ಯಕ್ಷ; ಸಿಎಂ ಅಭ್ಯರ್ಥಿ ಸಸ್ಪೆನ್ಸ್

Pinterest LinkedIn Tumblr

Raj-babbarಲಕ್ನೋ: ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಟ, ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರನ್ನಾಗಿ ನೇಮಿಸಿದೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಅವರನ್ನು ಅಖಾಡಕ್ಕೆ ಇಳಿಸಲಾಗುತ್ತಿದೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ.

ಮಂಗಳವಾರ ಗುಲಾಂ ನಬಿ ಆಜಾದ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆದರೆ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಬಗ್ಗೆ ತುಟಿ ಬಿಚ್ಚಿಲ್ಲ. ಅಲ್ಲದೇ ಪ್ರಿಯಾಂಕಾ ಅವರಿಗೆ ಉತ್ತರಪ್ರದೇಶದ ಹೊಣೆಗಾರಿಕೆ ವಹಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೂ ಆಜಾದ್ ಉತ್ತರ ಕೊಟ್ಟಿಲ್ಲ.

ಉತ್ತರಪ್ರದೇಶ ಚುನಾವಣೆಯ ದಿನಾಂಕ ಘೋಷಣೆಯಾದ ಮೇಲೆ ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
-ಉದಯವಾಣಿ

Comments are closed.