ನವದೆಹಲಿ (ಪಿಟಿಐ): ಮುಂಬೈ–ಅಹಮದಾಬಾದ್ ನಡುವಿನ ಬುಲೆಟ್ ರೈಲು ಕಾಮಗಾರಿ ಆರು ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು, ಈ ಮಾರ್ಗದ ರೈಲು ಪ್ರಯಾಣ ದರ ವಿಮಾನ ದರಕ್ಕಿಂತ ಕಡಿಮೆ ಇರಲಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸುರೇಶ್ ಪ್ರಭು, ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಮಾರ್ಗದಲ್ಲಿ ಬುಲೆಟ್ ರೈಲು ಓಡಲಿದೆ. ಈ ಅಂತರವನ್ನು ಬುಲೆಟ್ ರೈಲು ಕೇವಲ 2 ಗಂಟೆಗಳಲ್ಲಿ ಕ್ರಮಿಸಲಿದೆ ಎಂದು ತಿಳಿಸಿದರು.
ಇತರ ಯೋಜನೆಗಳಿಗಿಂತ ಈ ಯೋಜನೆಗೆ ಹೆಚ್ಚು ಅನುದಾನ ನೀಡಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎಲ್ಲ ರಾಜ್ಯಗಳಿಗೆ ನೀಡುವಂತೆ ಈ ಯೋಜನೆಗೂ ಅನುದಾನ ನೀಡಲಾಗಿದೆ. ಇದರಲ್ಲಿ ತಾರತಮ್ಯ ಮಾಡಿಲ್ಲ. ಅಲ್ಲದೇ, ಎಲ್ಲ ರಾಜ್ಯಗಳ ರೈಲ್ವೆ ಯೋಜನೆಗಳಿಗೆ ಈ ಹಿಂದೆ ನೀಡುತ್ತಿದ್ದುದಕ್ಕಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡಲಾಗಿದೆ’ ಎಂದರು.
₹97,636 ಸಾವಿರ ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಯೋಜನೆಗೆ ಅಗತ್ಯವಿರುವ ಶೇಕಡಾ 81ರಷ್ಟು ಹಣವನ್ನು ಜಪಾನ್‌ನಿಂದ ಪಡೆಯಲಾಗಿದೆ ಎಂದು ತಿಳಿಸಿದರು.
Comments are closed.