ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದ ನ್ಯಾಯಮೂರ್ತಿ ಪ್ರತಾಪ್ ಸಿಂಗ್ ಮಲಿಕ್ ನಿದ್ರೆ ಮಾತ್ರೆ ಸೇವಿಸೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ತಮ್ಮ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ದಾಖಲಿಸಿದ್ದರಿಂದ ತುಂಬಾ ಖಿನ್ನತೆಗೆ ಒಳಗಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ದ್ವಾರಕಾ ಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಯಾಗಿರುವ ಮಲಿಕ್ ಅವರನ್ನು ಹೆಡ್ಗೆವಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದ್ವಾರಕಾ ಕೋರ್ಟ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬಳು ನ್ಯಾಯಮೂರ್ತಿ ಮಲಿಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಳು.
ದ್ವಾರಕಾ ಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಮಲಿಕ್ ಕರ್ಕರ್‌ಡೋಮಾ ಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.
Comments are closed.