ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಅಪ್ರಾಪ್ತೆಯನ್ನು ಚುಡಾಯಿಸಿದ ಆರೋಪದಡಿ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.
ರೈಲಿನಲ್ಲಿ ಸಂಚರಿಸುತ್ತಿರಬೇಕಾದರೆ ಬಿಹಾರದ ಬಿಜೆಪಿ ಶಾಸಕ ತುನ್ನಾಜಿ ಪಾಂಡೆ ತನ್ನೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ ಎಂದು ಅಪ್ರಾಪ್ತೆಯೋರ್ವಳು ಪೊಲೀಸರಿಗೆ ದೂರು ನೀಡಿದ್ದು ಹಾಜಿಪುರ್ ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಎಂಎಲ್ ಸಿಯನ್ನು ಬಂಧಿಸಲಾಗಿದೆ.
ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ಹಾಗೂ ಬಿಜೆಪಿ ಎಂಎಲ್ ಸಿ ಪಾಂಡೆ ಇಬ್ಬರೂ ಪೂರ್ವಾಂಚಲ ಎಕ್ಸ್ ಪ್ರೆಸ್ ನಲ್ಲಿ ಚಲಿಸುತ್ತಿದ್ದರು. ಕ್ರಿಮಿನಲ್ ಹಿನ್ನೆಲೆಯುಳ್ಳ ಪಾಂಡೆ ರಾಜಕೀಯದಲ್ಲೂ ಸಕ್ರಿಯವಾಗಿದ್ದು, ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮದ್ಯ ಮಾಫಿಯಾದಲ್ಲಿ ಗುರುತಿಸಿಕೊಂಡಿದ್ದಾನೆ.
Comments are closed.